HomeBusinessBREAKING: ಜೂನ್ ಮೊದಲ ದಿನವೇ ಶುಭ ಸುದ್ದಿ: ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ

BREAKING: ಜೂನ್ ಮೊದಲ ದಿನವೇ ಶುಭ ಸುದ್ದಿ: ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ

ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಸುತ್ತಿನ ಮತದಾನದ ದಿನ ಗ್ಯಾಸ್ ಬೆಲೆ ಇಳಿಕೆಯಾಗಿದ್ದು, ತಿಂಗಳ ಆರಂಭದಲ್ಲಿಯೇ ಶುಭ ಸುದ್ದಿ ಸಿಕ್ಕಿದೆ.

ಜೂನ್ 1 ರಂದು ಜಾರಿಗೆ ಬರುವಂತೆ ತೈಲ ಮಾರಾಟ ಸಂಸ್ಥೆಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 72 ರೂ. ಕಡಿಮೆ ಮಾಡಿವೆ. ಹೊಸ ಬೆಲೆ 1787 ರೂ. ಈ ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿದೆ.

14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. 14.2 ಕೆಜಿ LPG ಸಿಲಿಂಡರ್ ಬೆಲೆ 829 ರೂ. ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ತಿಂಗಳ ಆರಂಭದಲ್ಲಿ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆಗಳನ್ನು ತೈಲ ಮಾರುಕಟ್ಟೆ ಏಜೆನ್ಸಿಗಳು ಪರಿಶೀಲಿಸುತ್ತವೆ ಮತ್ತು ದೇಶೀಯ ಮಾರುಕಟ್ಟೆಯಲ್ಲಿ LPG ಬೆಲೆಗಳನ್ನು ಕಡಿಮೆಗೊಳಿಸಲಾಗುತ್ತದೆ ಅಥವಾ ಹೆಚ್ಚಿಸಲಾಗುತ್ತದೆ. ಆದರೆ ಗ್ಯಾಸ್ ಬೆಲೆ ಇಳಿಕೆಗೂ ಚುನಾವಣೆಗೂ ಸಂಬಂಧವಿಲ್ಲ.

19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗಳನ್ನು ಸಾಮಾನ್ಯವಾಗಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಬಳಸಲಾಗುತ್ತದೆ. ಮನೆಯಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಅನ್ನು ಬಳಸಲಾಗುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular