HomeKarnatakaBREAKING NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್; ಜಾಮೀನು ಮಂಜೂರು

BREAKING NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್; ಜಾಮೀನು ಮಂಜೂರು

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

ಚುನಾವಣೆ ವೇಳೆ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ, ಭ್ರಷ್ಟಾಚಾರದ ದರಪಟ್ಟಿಯ ಜಾಹೀರಾತನ್ನು ಕಾಂಗ್ರೆಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕರು ಮಾನನಷ್ಟ ಮೊಕದ್ದಮೆ ಸಲ್ಲಿಸಿ, ಕೋರ್ಟ್ ಮೆಟ್ಟಿಲೇರಿದ್ದರು. ಈ ನಿಟ್ಟಿನಲ್ಲಿ ಕೋರ್ಟ್ ಮೂವರು ನಾಯಕರಿಗೆ ಸಮನ್ಸ್ ಜಾರಿ ಮಾಡಿ ಖುದ್ದು ಹಾಜರಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಿತ್ತು.

ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಚಾರಣೆಗೆ ಖುದ್ದು ಹಾಜರಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಪಷ್ಟನೆ ನೀಡಿದ್ದರು. ಅಲ್ಲದೆ ಜಾಮೀನು ನೀಡುವಂತೆ ಕೋರ್ಟ್ ಗೆ ಅರ್ಜಿ ಮೂಲಕ ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನವಿ ಆಲಿಸಿದ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಜಾಮೀನು ಬಾಂಡ್ ಗೆ ಸಹಿ ಮಾಡಿದ ಸಿಎಂ, ಡಿಸಿಎಂ ಕೋರ್ಟ್ ನಿಂದ ತೆರಳಿದ್ದಾರೆ.

ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಕೋರ್ಟ್ ಗೆ ಹಾಜರಾಗಿಲ್ಲ. ಇಂದು ಕೂಡ ವಿಚಾರಣೆಯಿಂದ ವಿನಾಯಿತಿ ಕೇಳಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular