HomeKarnatakaವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್: ಸಚಿವ ನಾಗೇಂದ್ರ ಬಂಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್: ಸಚಿವ ನಾಗೇಂದ್ರ ಬಂಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ ಹಾಗೂ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಹಾಗೂ ಸಚಿವ ನಾಗೇಂದ್ರ ಅವರನ್ನು ಬಂಧಿಸಿ ವಿಚಾರಣೆ ನಡೆಸನೇಕು ಎಂದು ಒತ್ತಾಯಿಸಿದರು.

ಇದೊಂದು ಬಹುದೊಡ್ಡ ಹಗರಣವಾಗಿದೆ. ಇದರಲ್ಲಿ ಸಿಎಂ ಸೇರಿದಂತೆ ಸಂಬಂಧಿಸಿದ ಎಲ್ಲರ ಮೇಲೂ ತನಿಖೆ ನಡೆಸಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚುನಾವಣೆಗೆ ಬಳಸಲೆಂದೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣವನ್ನು ಲೂಟಿ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ಸರ್ಕಾರಿ ದುಡ್ಡು ಲಪಟಾಯಿಸಿ ಚುನಾವಣೆ ನಡೆಸಲು ಷಡ್ಯಂತ್ರ ನಡೆಸಿದೆ ಎಂದು ಜೋಶಿ ಆರೋಪಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular