ಬೆಂಗಳೂರು: ಲೋಕಸಭಾ ಚುನಾವಣೆ ಮತದಾನೋತ್ತರ ಸಮೀಕ್ಷೆ ಹೊರಬಿದ್ದಿದ್ದು, ಎಲ್ಲೆಡೆ ಬಿಜೆಪಿ ಪರವಾದ ಅಲೆಯಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಎಕ್ಸಿಟ್ ಪೋಲ್ ನಲ್ಲಿ ಎಲ್ಲೆಡೆ ಬಿಜೆಪಿ ಪರ ಅಲೆ ಇದೆ ಎಂದು ಹೇಳಲಾಗಿದೆ. ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಎನ್ ಡಿಎ ಪರವಾಗಿ ಸಮೀಕ್ಷೆಗಳು ಬಂದಿವೆ ಎಂದರು.
ನರೇಂದ್ರ ಮೋದಿ ಹೆಚ್ಚು ಮತಗಳಿಂದ ಗೆದ್ದು ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ. ಜೂನ್ 4ರಂದು ಏನಾಗಲಿದೆ ಅನ್ನೋದು ಸ್ಪಷ್ಟವಾಗಿ ಗೊತ್ತಾಗಲಿದೆ ಎಂದು ಹೇಳಿದರು.