HomeIndiaಸಿಕ್ಕಿಂ ವಿಧಾನಸಭೆ ಚುನಾವಣೆ ಫಲಿತಾಂಶ: 32ರಲ್ಲಿ 31 ಸ್ಥಾನ ಗೆದ್ದ SKM ಗೆ ಭರ್ಜರಿ ಜಯ

ಸಿಕ್ಕಿಂ ವಿಧಾನಸಭೆ ಚುನಾವಣೆ ಫಲಿತಾಂಶ: 32ರಲ್ಲಿ 31 ಸ್ಥಾನ ಗೆದ್ದ SKM ಗೆ ಭರ್ಜರಿ ಜಯ

ಗ್ಯಾಂಗ್ ಟಕ್: ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ನೇತೃತ್ವದ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(SKM) 32 ಸದಸ್ಯರ ವಿಧಾನಸಭೆಯಲ್ಲಿ 31 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಹಿಮಾಲಯ ರಾಜ್ಯದಲ್ಲಿ ಭಾನುವಾರ ಅಧಿಕಾರವನ್ನು ಉಳಿಸಿಕೊಂಡಿದೆ.

ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (SDF) ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಶ್ಯಾರಿ ಕ್ಷೇತ್ರದಿಂದ ಎಸ್‌ಡಿಎಫ್‌ನ ತೇನ್ಸಿಂಗ್ ನಾರ್ಬು ಲಮ್ತಾ ಅವರು ವಿರೋಧ ಪಕ್ಷದಿಂದ ಚುನಾವಣೆಯಲ್ಲಿ ಗೆದ್ದ ಏಕೈಕ ಅಭ್ಯರ್ಥಿಯಾಗಿದ್ದಾರೆ.

ಎರಡೂ ಸ್ಥಾನಗಳಲ್ಲೂ ಗೆದ್ದ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ತಮ್ಮ ಎರಡೂ ಸ್ಥಾನಗಳನ್ನು ಗೆದ್ದಿದ್ದಾರೆ. ರೆನಾಕ್ ಕ್ಷೇತ್ರದಿಂದ ಮತ್ತು ಸೋರೆಂಗ್ ಚಕುಂಗ್ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. ತಮಾಂಗ್ ಅವರು SDF ನ ಸೋಮ್ ನಾಥ್ ಪೌಡಿಯಾಲ್ ಅವರನ್ನು 7,044 ಮತಗಳಿಂದ ಸೋಲಿಸುವ ಮೂಲಕ ರೆನಾಕ್ ವಿಧಾನಸಭಾ ಸ್ಥಾನವನ್ನು ಪಡೆದರು ಎಂದು EC ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2019 ರವರೆಗೆ ಸತತ 25 ವರ್ಷಗಳ ಕಾಲ ರಾಜ್ಯವನ್ನು ಆಳಿದ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (SDF) ಕೇವಲ ಒಂದು ಸ್ಥಾನವನ್ನು ಗಳಿಸಿತು.

ಏಪ್ರಿಲ್ 19 ರಂದು ಲೋಕಸಭೆಯ ಮೊದಲ ಹಂತದ ಚುನಾವಣೆಯೊಂದಿಗೆ ಸಿಕ್ಕಿಂ ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗಳು ನಡೆದವು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular