HomeKarnatakaಆಗಮನದ ಬೆನ್ನಲ್ಲೇ ಅಬ್ಬರಿಸಿದ ಮುಂಗಾರು ಮಳೆಗೆ ಬೆಂಗಳೂರು ಜನ ತತ್ತರ: 13 ಜಿಲ್ಲೆಗಳಿಗೆ ಇಂದು ಯೆಲ್ಲೋ...

ಆಗಮನದ ಬೆನ್ನಲ್ಲೇ ಅಬ್ಬರಿಸಿದ ಮುಂಗಾರು ಮಳೆಗೆ ಬೆಂಗಳೂರು ಜನ ತತ್ತರ: 13 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಆಗಮನದ ಬೆನ್ನಲ್ಲೇ ಮಳೆಯ ಆರ್ಭಟ ಜೋರಾಗಿದೆ. ಹವಾಮಾನ ಇಲಾಖೆ ಸೋಮವಾರ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಭಾನುವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ಕಡೆ ಅಂಡರ್ ಪಾಸ್ ಸೇರಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವು ಕಡೆ ಮರಗಳು ಉರುಳಿ ಬಿದ್ದು ಸಂಚಾರಕ್ಕೆ ತೊಂದರೆಯಾಗಿದೆ. ಮರಗಳು ಬಿದ್ದು, ಹಲವು ವಾಹನಗಳು ಜಖಂಗೊಂಡಿವೆ.

ಜೂನ್ 3ರಂದು ದಕ್ಷಿಣ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ಹಾಸನ, ಮೈಸೂರು, ತುಮಕೂರು, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್ 4ರಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಭಾನುವಾರ ಮಂಡ್ಯ ಜಿಲ್ಲೆ ಹೊನಕೆರೆಯಲ್ಲಿ 8 ಸೆ.ಮೀ., ಬೆಂಗಳೂರು ನಗರ ಜಿಕೆವಿಕೆಯಲ್ಲಿ, ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ 6 ಸೆ.ಮೀ.,  ದೇವನಹಳ್ಳಿಯಲ್ಲಿ 5 ಸೆ.ಮೀ. ಮಳೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular