
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಬೆಂಗಳೂರಿನ ವಸಂತನಗರದಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಎಸ್ಐಟಿ ತಂಡ ದಾಳಿ ನಡೆಸಿದ್ದು, ಡಿಜಿಟಲ್ ಎವಿಡೆನ್ಸ್ ಗಾಗಿ ಪರಿಶೀಲನೆ ನಡೆಸಿದೆ. ಬಂಧಿತ ಇಬ್ಬರು ಆರೋಪಿಗಳೊಂದಿಗೆ ಕಚೇಇಯಲ್ಲಿ ಸ್ಥಳ ಮಹಜರು ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.