HomeKarnatakaಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2024 -25 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕ ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅನುಮತಿ ನೀಡಿದೆ.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಶಾಲೆ ಶಿಕ್ಷಕರಿಗೆ 10,000 ರೂ., ಪ್ರೌಢಶಾಲೆ ಶಿಕ್ಷಕರಿಗೆ 10,500 ರೂ. ಗೌರವಧನ ನೀಡಲಾಗುವುದು. ಪ್ರಾಥಮಿಕ ಶಾಲೆಗಳಲ್ಲಿ 35,000 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಿದ್ದು, ಮೊದಲ ಹಂತದಲ್ಲಿ 33,863 ಹುದ್ದೆಗಳಿಗೆ ಜಿಲ್ಲಾವಾರು ಮತ್ತು ತಾಲೂಕುವಾರು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು.

2024 -25 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ಅನುಗುಣವಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ, ಬಡ್ತಿ, ವರ್ಗಾವಣೆ ಮೂಲಕ ಶಿಕ್ಷಕರನ್ನು ನೇಮಕ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದೋ ಮೊದಲು ಅಲ್ಲಿಯವರೆಗೆ ಒಟ್ಟು 10000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.

ಸರ್ಕಾರಿ ಪ್ರೌಢಶಾಲೆಗಳಿಗೆ ಶಾಲಾವಾರು, ತಾಲೂಕುವಾರು ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕ ಮಾಡಲು ತಾಲೂಕು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಸಂಬಂಧಿಸಿದ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಮೂಲಕವೇ ನೇಮಕ ಮಾಡಿಕೊಳ್ಳಬೇಕು ಎಂದು ಹೇಳಲಾಗಿದೆ. ಅಲ್ಲದೆ, ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು, ಬೆಂಗಳೂರು ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಮೊದಲ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳಲು ಕ್ರಮ ವಹಿಸುವಂತೆ ತಿಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular