alex Certify BREAKING : 2 ದಶಕಗಳ ಬಳಿಕ ಹಾಸನ ಗೆದ್ದ ಕಾಂಗ್ರೆಸ್, ಶ್ರೇಯಸ್ ಪಟೇಲ್ ಗೆ ಭರ್ಜರಿ ಗೆಲುವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 2 ದಶಕಗಳ ಬಳಿಕ ಹಾಸನ ಗೆದ್ದ ಕಾಂಗ್ರೆಸ್, ಶ್ರೇಯಸ್ ಪಟೇಲ್ ಗೆ ಭರ್ಜರಿ ಗೆಲುವು..!

ಹಾಸನ : ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಎರಡು ದಶಕಗಳ ಬಳಿಕ ಹಾಸನದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ.

ಎರಡು ದಶಕಗಳ ಬಳಿಕ ಕಾಂಗ್ರೆಸ್ ಸಂಸತ್ ಸ್ಥಾನ ಗೆದ್ದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸೋಲು ಕಂಡಿದ್ದು,  ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆ ಗೆಲುವಾಗಿದೆ. 1999 ರಲ್ಲಿ ದೇವೇಗೌಡರನ್ನು ಸೋಲಿಸಿದ ಪುಟ್ಟಸ್ವಾಮಿಗೌಡರ ಮೊಮ್ಮಗನಿಂದ ದೇವೇಗೌಡರ ಮೊಮ್ಮಗನಿಗೆ ಸೋಲಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಹೆಚ್ಡಿ ಕುಮಾರಸ್ವಾಮಿಗೆ ಭರ್ಜರಿ ಗೆಲುವಾಗಿದೆ. ಹಾಗೂ ಉತ್ತರ ಕನ್ನಡ ಕ್ಷೇತ್ರದಲ್ಲಿ. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಭರ್ಜರಿ ಗೆಲುವು ಸಾಧಿಸಿದ್ದಾರೆ. 45,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ವಿರುದ್ಧ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು ದಾಖಲಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...