HomeKarnatakaBREAKING : ಧಾರವಾಡ ಕ್ಷೇತ್ರದಲ್ಲಿ ಐದನೇ ಬಾರಿಗೆ ಗೆದ್ದು ದಾಖಲೆ ಬರೆದ 'ಪ್ರಹ್ಲಾದ್ ಜೋಶಿ'..!

BREAKING : ಧಾರವಾಡ ಕ್ಷೇತ್ರದಲ್ಲಿ ಐದನೇ ಬಾರಿಗೆ ಗೆದ್ದು ದಾಖಲೆ ಬರೆದ ‘ಪ್ರಹ್ಲಾದ್ ಜೋಶಿ’..!

ಧಾರವಾಡ : ಧಾರವಾಡ ಕ್ಷೇತ್ರದಲ್ಲಿ ಸತತ ಐದನೇ ಬಾರಿಗೆ ಗೆದ್ದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ದಾಖಲೆ ಬರೆದಿದ್ದಾರೆ.

ಇದುವರೆಗೆ ನಾಲ್ಕು ಬಾರಿ ಮಾತ್ರ ಸತತವಾಗಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಈಗ ಹೊಸ ದಾಖಲೆ ಬರೆದಿದ್ದಾರೆ. 80 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ವಿರುದ್ಧ ಜಯಭೇರಿ ಭಾರಿಸಿದ್ದಾರೆ.

ಹಾಗೆ, ಬೀದರ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆಗೆ ಭರ್ಜರಿ ಗೆಲುವು ಸಿಕ್ಕಿದೆ. 1 ಲಕ್ಷ 25 ಸಾವಿರ ಅಧಿಕ ಮತಗಳಿಂದ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಸಾಗರ್ ಖಂಡ್ರೆ ಗೆದ್ದು ಬೀಗಿದ್ದಾರೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಗೆಲುವು ಸಾಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular