ನವದೆಹಲಿ: ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನಕ್ಕೆ (ಎಸಿ 43) ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಟೇಕ್ ಆಫ್ ಆಗಬೇಕಿದ್ದ ವಿಮಾನವನ್ನು ಐಸೋಲೇಷನ್ ಕಳುಹಿಸಲಾಗಿತ್ತು. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ವಿಮಾನ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ನಡೆಸಲಾಯಿತು.
ಕಳೆದ ವಾರ ಇದೇ ರೀತಿಯ ಘಟನೆಯಲ್ಲಿ, 306 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತ ಪ್ಯಾರಿಸ್-ಮುಂಬೈ ವಿಸ್ತಾರಾ ವಿಮಾನಕ್ಕೆ “ಬಾಂಬ್ ಗೆ ಬೆದರಿಕೆ ಬಂದಿತ್ತು.