HomeIndiaBREAKING : ಸಿಎಂ 'ಅರವಿಂದ್ ಕೇಜ್ರಿವಾಲ್' ಗೆ ಬಿಗ್ ಶಾಕ್ ; ಮಧ್ಯಂತರ ಜಾಮೀನು ನೀಡಲು...

BREAKING : ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಬಿಗ್ ಶಾಕ್ ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ..!

ನವದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ.

ವೈದ್ಯಕೀಯ ಕಾರಣಗಳಿಗಾಗಿ 7 ದಿನಗಳ ಮಧ್ಯಂತರ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ವಜಾಗೊಳಿಸಿದ್ದಾರೆ.

ಅವರ ನಿಯಮಿತ ಜಾಮೀನು ಅರ್ಜಿಯ ವಿಚಾರಣೆ ಜೂನ್ 07 ರಂದು ನಡೆಯಲಿದೆ. ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅವರಿಗೆ ಸುಪ್ರೀಂ ಕೋರ್ಟ್ ಜೂನ್ 01 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಇದಾದ ಒಂದು ದಿನದ ನಂತರ ಅವರು ಶರಣಾದರು.
ತಿಹಾರ್ ಜೈಲಿನಿಂದ ವಿಸಿ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ಕೇಜ್ರಿವಾಲ್ ಅವರನ್ನು ಜೂನ್ 19 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅವರನ್ನು ಜೂನ್ 19 ರಂದು ಮಧ್ಯಾಹ್ನ 2 ಗಂಟೆಗೆ ರಜಾಕಾಲದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular