ಬೆಂಗಳೂರು : ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ಪ್ರಭು (38) ಲಕ್ಷಮ್ಮ (30) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯಿಂದ ಶವದ ಕೊಳೆತ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮನೆಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿದ್ದಾರೆ.