‘ಈ ದಡ್ ನನ್ ಮಗಂಗೇ ಯಾವೋನಾದ್ರ ಇನ್ಮೇಲೆ ಬುದ್ದಿವಂತ ಅಂದ್ರೆ ಅಷ್ಟೇ : ಏನಿದು ಉಪ್ಪಿ ಟ್ವೀಟ್..?

ಬೆಂಗಳೂರು : ಲೋಕಸಭಾ ಚುನಾವಣಾ ಫಲಿತಾಂಶದ ಪ್ರಕಟವಾದ ಬೆನ್ನಲ್ಲೇ ನಟ ಉಪೇಂದ್ರ ಟ್ವೀಟ್ ಒಂದನ್ನು ಮಾಡಿದ್ದಾರೆ.ಈ ದಡ್ ನನ್ ಮಗಂಗೇ ಯಾವೋನಾದ್ರ ಇನ್ ಮೇಲೆ ಬುದ್ದಿವಂತಾ ಅಂದ್ರೇ ಅಷ್ಟೇ’ ಎಂದಿದ್ದಾರೆ. ಉಪ್ಪಿ ಕೆಲವು ವಿಚಾರಗಳನ್ನಿಟ್ಟುಕೊಂಡು ಬಹಳ ಸ್ವಾರಸ್ಯಕರವಾಗಿ ಟ್ವೀಟ್ ಮಾಡಿದ್ದಾರೆ.

ಉಪೇಂದ್ರ ಹೇಳಿದ್ದೇನು..?

ವಾಹ್ ಮೈ ಡಿಯರ್ ಪ್ರಜಾಪ್ರಭುಗಳೇ ವಾಹ್… ಉಪೇಂದ್ರ ಸೋಲು ಗೆಲವು ಬಗ್ಗೆ ತುಂಬಾ ಚಿಂತೆ ಮಾಡ್ತಿದೀರ ! ಎಂತಾ ನಿಸ್ವಾರ್ಥ ! ಎಂತಾ ತ್ಯಾಗ ಮನೋಭಾವ ! ನಿಮ್ಮೆಲ್ಲರ ಪಾದಕ್ಕೆ ಅಡ್ ಬಿದ್ದೆ ಡೋಂಟ್ ವರೀ… ನಾನ್ ಗೆಲ್ಬೇಕು ಅಂತ ಅನ್ನಿಸಿದಾಗ ಯಾವುದಾದರೂ ರಾಜಕೀಯ ಪಕ್ಷ ಸೇರಿ ನೀವ್ ಹೇಳ್ದಾಗೆಲ್ಲಾ ಮಾಡ್ತೀನಿ ಗೆದ್ದೇ ಗೆಲ್ತೀನಿ ನೀವ್ ಗೆಲ್ಲೋದ್ ಯಾವಾಗ ಅಂತ ನೀವ್ ಯೋಚನೆ ಮಾಡ್ರಪ್ಪೋ ನೆಕ್ಸ್ಟ್ ಎಲೆಕ್ಷನ್ ನಲ್ಲಿ ನನಗ್ ಕೆಲ್ಸಾ ಕೊಡ್ತೀರ ಅಂದ್ರೆ ನಿಲ್ತೀನಿ ಆಗ್ಲೂ ನೀವ್ ಎಮೋಸನಲ್ ಪ್ರಚಾರ ಮಾಡ್ರೀ ….. ಸಭೆ ಸಮಾರಂಬ ಎಲ್ಲಾ ಮಾಡ್ರೀ …. ಕಷ್ಟ ಪಡ್ರೀ ….. ಆಮೇಲ್ ಐದು ವರ್ಸ ನೀವೇನ್ ಬೇಕಾದ್ರೂ ಮಾಡ್ಕಳಿ ನಾವ್ ಕೇಳಕ್ ಬರಲ್ಲ ಅಂದ್ರೆ…… ಉಸ್.. ಏನ್ ಬರೀಬೇಕೋ ಗೊತ್ತಾಗ್ತಿಲಿರಪ್ಪೋ ಈ ದಡ್ ನನ್ ಮಗಂಗೇ ಯಾವೋನಾದ್ರ ಇನ್ ಮೇಲೆ ಬುದ್ದಿವಂತಾ ಅಂದ್ರೇ ಅಷ್ಟೇ… ಸೆಂದಾಗಿರಕ್ಕಿಲ್ಲಾ … ಎಂದು ನಟ ಉಪೇಂದ್ರ ಹೇಳಿದ್ದಾರೆ.

https://twitter.com/nimmaupendra/status/1798643828808974560

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read