ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ.
ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಪತ್ತೆಯಾದ ಕೂಡಲೇ ಬಂಧನಕ್ಕೆ ಒಳಗಾಗಲಿದ್ದಾರೆ. 15 ದಿನಗಳಿಂದ ನಾಪತ್ತೆಯಾಗಿರುವ ಭವಾನಿ ರೇವಣ್ಣ ಅವರ ಬಂಧನಕ್ಕೆ ಎಸ್ಐಟಿ ತೀವ್ರ ಶೋಧ ನಡೆಸಿದ್ದು, ಸುಳಿವು ಸಿಗುತ್ತಿಲ್ಲ.
ಸಂತ್ರಸ್ತೆ ಅಪಹರಣ ಪ್ರಕರಣದ ವಿಚಾರಣೆಗೆ ತನಿಖೆಗಾಗಿ ನೋಟಿಸ್ ನೀಡಿದ್ದರೂ ಭವಾನಿ ರೇವಣ್ಣ ಹಾಜರಾಗಿಲ್ಲ. ತನಿಖೆಗೆ ಅಸಹಕಾರ ತೋರಿದ ಕಾರಣಕ್ಕೆ ಅರೆಸ್ಟ್ ವಾರಂಟ್ ಜಾರಿ ಮಾಡುವಂತೆ ನ್ಯಾಯಾಲಯಕ್ಕೆ ಎಸ್ಐಟಿ ಮನವಿ ಮಾಡಿದ್ದು, ಮನವಿ ಪುರಸ್ಕರಿಸಿದ ಕೋರ್ಟ್ ಭವಾನಿ ರೇವಣ್ಣ ವಿರುದ್ಧ ವಾರಂಟ್ ಜಾರಿಗೊಳಿಸಿದೆ.