alex Certify BREAKING : ಕರ್ನಾಟಕದಲ್ಲಿ ‘ಹಮಾರೆ ಬಾರಾ’ ಚಿತ್ರ ಬಿಡುಗಡೆ ನಿಷೇಧ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕರ್ನಾಟಕದಲ್ಲಿ ‘ಹಮಾರೆ ಬಾರಾ’ ಚಿತ್ರ ಬಿಡುಗಡೆ ನಿಷೇಧ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ‘ಹಮಾರೆ ಬಾರಾ’ ಚಿತ್ರದ ಬಿಡುಗಡೆ ಅಥವಾ ಪ್ರಸಾರವನ್ನು ಎರಡು ವಾರಗಳವರೆಗೆ ಅಥವಾ ಮುಂದಿನ ಸೂಚನೆ ಬರುವವರೆಗೆ ಕರ್ನಾಟಕ ಸರ್ಕಾರ ನಿಷೇಧಿಸಿದೆ.

ಕರ್ನಾಟಕ ಸಿನೆಮಾ ನಿಯಂತ್ರಣ ಕಾಯ್ದೆ 1964, ಸೆಕ್ಷನ್ 15(1) ಮತ್ತು 15(5)ರ ಪ್ರಕಾರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ‘ಹಮಾರೆ ಬಾರಾ’ ಬಿಡುಗಡೆಯು ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸುತ್ತದೆ ಎಂದು ಕರ್ನಾಟಕ ಸರ್ಕಾರ ಆರೋಪಿಸಿದೆ.

ಹಲವಾರು ಅಲ್ಪಸಂಖ್ಯಾತ ಸಂಘಟನೆಗಳು ಮತ್ತು ನಿಯೋಗಗಳ ಮನವಿ ಪರಿಗಣಿಸಿದ ನಂತರ ಮತ್ತು ಟ್ರೈಲರ್ ನೋಡಿದ ನಂತರ ಕರ್ನಾಟಕ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ರೆ, ಕರ್ನಾಟಕದಲ್ಲಿಇಂದು (ಜೂನ್ 07) ಹಮಾರೆ ಬಾರಾ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ, ಈ ಸಿನಿಮಾದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂದಿನ ಆದೇಶದ ವರೆಗೂ ಪ್ರದರ್ಶನಕ್ಕೆ ತಡೆ ನೀಡಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...