ನವದೆಹಲಿ: ದೆಹಲಿಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮತ್ತು ಸಂಸದೀಯ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕಾಂಗ ನಾಯಕರಾಗಿ ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಹತ್ತು ವರ್ಷಗಳ ನಂತರ ಕಾಂಗ್ರೆಸ್ ಪಕ್ಷ ಪ್ರತಿ ಪಕ್ಷ ನಾಯಕನ ಸ್ಥಾನ ಪಡೆಯುತ್ತಿದೆ. ಈ ಬಾರಿ ಕಾಂಗ್ರೆಸ್ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಇಂದು ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿರುವ ಸಿಡಬ್ಲ್ಯೂಸಿ ಮತ್ತು ಸಂಸದೀಯ ಸಭೆಯಲ್ಲಿ ರಾಹುಲ್ ಗಾಂಧಿ ಆಯ್ಕೆ, ಬಿಜೆಪಿ ವಿರುದ್ಧ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.