ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡಿನಿಂದ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿದ್ದಾರೆ. ಇವುಗಳಲ್ಲಿ ಒಂದು ಕ್ಷೇತ್ರವನ್ನು ರಾಹುಲ್ ಗಾಂಧಿ ಉಳಿಸಿಕೊಳ್ಳಲಿದ್ದಾರೆ.
ರಾಯ್ ಬರೇಯಲಿಯಲ್ಲಿ ಸತತವಾಗಿ ಕಾಂಗ್ರೆಸ್ ಜಯದ ದಾಖಲೆ ಮುಂದುವರೆದಿದೆ. ಈ ಕ್ಷೇತ್ರವನ್ನು ರಾಹುಲ್ ಗಾಂಧಿ ಉಳಿಸಿಕೊಳ್ಳಲಿದ್ದು, ಕೇರಳದ ವಯನಾಡು ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅವರನ್ನು ಸ್ಪರ್ಧಿಸಬೇಕೆಂಬ ಒತ್ತಡ ಹೆಚ್ಚಾಗಿದೆ.
ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅವಕಾಶವಿದ್ದರೂ ಪ್ರಿಯಾಂಕಾ ಗಾಂಧಿ ದೇಶಾದ್ಯಂತ ಸಂಚರಿಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದು, ರಾಹುಲ್ ಗಾಂಧಿ ತೆರವುಗೊಳಿಸುವ ಒಂದು ಕ್ಷೇತ್ರದಿಂದ ಪ್ರಿಯಾಂಕ ಗಾಂಧಿ ಅವರನ್ನು ಕಣಕ್ಕಿಳಿಸಬೇಕೆಂಬ ಒತ್ತಡ ಹೆಚ್ಚಾಗಿದೆ.
ಹೀಗಾಗಿ ರಾಹುಲ್ ಗಾಂಧಿ ರಾಯ್ ಬರೇಲಿ ಕ್ಷೇತ್ರ ಉಳಿಸಿಕೊಂಡರೆ ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ. ಒಂದು ವೇಳೆ ವಯನಾಡು ಕ್ಷೇತ್ರವನ್ನು ರಾಹುಲ್ ಗಾಂಧಿ ಉಳಿಸಿಕೊಂಡರೆ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.