alex Certify BIG NEWS : ‘NEET’ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ : ಸಿಎಂ ಸಿದ್ದರಾಮಯ್ಯ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘NEET’ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ : ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಕೇಂದ್ರ ಸರ್ಕಾರ ಮತ್ತು ಎನ್ಟಿಎ ಮಾಡಿರುವ ಯಡವಟ್ಟಿನಿಂದಾಗಿ ನೀಟ್ ಫಲಿತಾಂಶ ಪ್ರಕಟವಾದ ನಂತರ ದೌಸಾದಲ್ಲಿ ಅಜಿತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ರೇವಾ ಯುವತಿ ಬಗೀಶಾ ತಿವಾರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬರೀ ವಿವಾದಗಳಿಂದಲೇ ತುಂಬಿರುವ ಮತ್ತು ಯುವಜನರು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವ ಎನ್ಟಿಎಯ ನೀಟ್ ಪರೀಕ್ಷಾ ವ್ಯವಸ್ಥೆ ನಿಜಕ್ಕೂ ಎಂತಹದ್ದು ಎಂಬ ಪ್ರಶ್ನೆ ಕಾಡಲಾರಂಭಿಸಿದೆ…ಈ ಬಗ್ಗೆ ತನಿಖೆಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಎನ್ಟಿಎ ಮಾಡಿರುವ ಯಡವಟ್ಟಿನಿಂದಾಗಿ ನೀಟ್ ಫಲಿತಾಂಶ ಪ್ರಕಟವಾದ ನಂತರ ದೌಸಾದಲ್ಲಿ ಅಜಿತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ರೇವಾ ಯುವತಿ ಬಗೀಶಾ ತಿವಾರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬರೀ ವಿವಾದಗಳಿಂದಲೇ ತುಂಬಿರುವ ಮತ್ತು ಯುವಜನರು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವ ಎನ್ಟಿಎಯ ನೀಟ್ ಪರೀಕ್ಷಾ ವ್ಯವಸ್ಥೆ ನಿಜಕ್ಕೂ ಎಂತಹದ್ದು ಎಂಬ ಪ್ರಶ್ನೆ ಕಾಡಲಾರಂಭಿಸಿದೆ. ಮೋದಿ ಅವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ಮತ್ತಷ್ಟು ಯುವಜನರು ಪ್ರಾಣ ಕಳೆದುಕೊಳ್ಳುವ ಮುನ್ನ ಪರೀಕ್ಷಾ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ನೊಂದ ಪರೀಕ್ಷಾರ್ಥಿಗಳ ಅಹವಾಲು ಆಲಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸುತ್ತೇನೆ.

ನಿಗದಿತ ವೇಳಾಪಟ್ಟಿಯಂತೆ ನೀಟ್ ಪರೀಕ್ಷೆಯನ್ನು ಮೇ 5, 2024 ರಂದು ನಡೆಸಲಾಯಿತು ಮತ್ತು ಅದರ ಫಲಿತಾಂಶವು ಜೂನ್ 14, 2024 ರಂದು ಪ್ರಕಟವಾಗಬೇಕಿತ್ತು. ಆದರೆ ಇದ್ದಕ್ಕಿದ್ದಂತೆ ಫಲಿತಾಂಶವನ್ನು ಜೂನ್ 4, 2024 ರಂದು ಪ್ರಕಟಿಸಲಾಯಿತು. ಇದೇ ದಿನ ದೇಶದ ಸಂಸತ್ ಚುನಾವಣೆಯ ಫಲಿತಾಂಶ ಬಂದಿದ್ದು, ಇಡೀ ದೇಶವೇ ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಕೇಳುವುದರಲ್ಲಿ ನಿರತವಾಗಿತ್ತು. ಈ ಗದ್ದಲದಲ್ಲಿ ನೀಟ್ ಫಲಿತಾಂಶವನ್ನು ತರಾತುರಿಯಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆಯ ಅಕ್ರಮಗಳನ್ನು ಮುಚ್ಚಿಹಾಕಬಹುದು ಎಂಬ ಕಾರಣಕ್ಕಾಗಿಯೇ? ಅಲ್ಲದಿದ್ದರೆಮೋದಿ ಸರ್ಕಾರ ತರಾತುರಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು ಯಾಕೆ? ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

2019 ರಿಂದ 2023 ರವರೆಗೆ, ನೀಟ್ ಪರೀಕ್ಷೆಯಲ್ಲಿ 600 ಅಂಕಗಳನ್ನು ಗಳಿಸಿದವರು ಕೈಗೆಟುಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸುಲಭವಾಗಿ ಪ್ರವೇಶ ಪಡೆದಿದ್ದರು. ಈ ವರ್ಷ ನೀಟ್ ಪರೀಕ್ಷೆಯ ಅಂಕಮಿತಿಯು 137 ಅಂಕಗಳಿಂದ 164 ಕ್ಕೆ ಏರಿಕೆಯಾಗಿದೆ. ಈ ಬಾರಿ 660 ಅಂಕ ಗಳಿಸಿದ ಅಭ್ಯರ್ಥಿಗಳು ಮಾತ್ರ ಕೈಗೆಟಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು. ನೀಟ್ ಪರೀಕ್ಷೆಗೆ ಹಾಜರಾಗಿರುವ 24 ಲಕ್ಷಕ್ಕೂ ಹೆಚ್ಚು ಯುವಜನರು ಬಹುತೇಕ ಬಡ-ಮಧ್ಯಮ ವರ್ಗದ ಕುಟುಂಬಗಳಿಂದ ಬಂದವರು. ವೈದ್ಯರಾಗುವ ಹಂಬಲ ಹೊಂದಿದವರು. ಆದರೆ ಈ ಪರೀಕ್ಷಾ ಗೊಂದಲದಿಂದಾಗಿ ಲಕ್ಷಾಂತರ ಯುವಕರ ಕನಸುಗಳು ನುಚ್ಚುನೂರಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಿದಾಬಾದ್ನ ನೀಟ್ ಪರೀಕ್ಷಾ ಕೇಂದ್ರದಲ್ಲಿ ತಪ್ಪು ಪತ್ರಿಕೆಯನ್ನು ವಿತರಿಸಲಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು 45 ನಿಮಿಷಗಳನ್ನು ಕಳೆದುಕೊಳ್ಳವಂತಾಯಿತು. ಹಾಗಾಗಿ ಈ ಸಮಯಕ್ಕೆ ಪ್ರತಿಯಾಗಿ ಎನ್ಟಿಎ ಈ ಕೇಂದ್ರದ ಅಭ್ಯರ್ಥಿಗಳಿಗೆ ‘ಗ್ರೇಸ್ಮಾರ್ಕ್’ ನೀಡಿದೆ. ಇದು ನೂರು ಪ್ರತಿಶತ ಅಂಕ ಗಳಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಸಮಜಾಯಿಷಿ ನೀಡುತ್ತಿದೆ. “ಎನ್ಟಿಎ ಪ್ರಾಸ್ಪೆಕ್ಟಸ್”, “ನೀಟ್ ಬ್ರೋಷರ್” ಮತ್ತು “ಸರ್ಕಾರಿ ಸೂಚನೆಗಳಲ್ಲಿ” ಈ ರೀತಿಯಲ್ಲಿ ಗ್ರೇಸ್ ಅಂಕಗಳನ್ನು ನೀಡುವ ಅವಕಾಶ ಇರುವ ಕುರಿತು ಯಾವುದೇ ಮಾಹಿತಿ ಇಲ್ಲ. ಹಾಗಾದರೆ ಈ ಗ್ರೇಸ್ ಮಾರ್ಕ್ಗಳನ್ನು ಯಾವ ಆಧಾರದ ಮೇಲೆ ನೀಡಲಾಗಿದೆ? ಈ ಬಗ್ಗೆ ಮೋದಿ ಸರ್ಕಾರದಿಂದ ಸಾರ್ವಜನಿಕ ಸೂಚನೆ ಅಥವಾ ಜಾಹೀರಾತು ನೀಡಲಾಗಿದೆಯೇ? ಬೇರೆ ಯಾವುದಾದರೂ ಕೇಂದ್ರದಲ್ಲಿ ಇದೇ ರೀತಿ ಗ್ರೇಸ್ ಮಾರ್ಕ್ಸ್ ನೀಡಲಾಗಿದೆಯೇ? ಎಂಬಿತ್ಯಾದಿ ಮಾಹಿತಿಯನ್ನು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಸರ್ಕಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...