HomeKarnatakaಸಾವಿನಲ್ಲೂ ಸಾರ್ಥಕತೆ ಮೆರೆದ ದಂಪತಿ: ಅಂಗಾಂಗ ದಾನ

ಸಾವಿನಲ್ಲೂ ಸಾರ್ಥಕತೆ ಮೆರೆದ ದಂಪತಿ: ಅಂಗಾಂಗ ದಾನ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಅವರ ಅಂಗಾಂಗಗಳನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾನ ಮಾಡಿದ್ದಾರೆ.

ಮಂಡ್ಯ ತಾಲೂಕಿನ ಚಿಕ್ಕಬಾಣಸವಾಡಿಯ ಸಿ. ಮಂಜುನಾಥ್(46) ಅವರ ಪತ್ನಿ ಹೆಚ್.ಎಂ. ಸುನೀಲಾ(40) ಅಪಘಾತದಲ್ಲಿ ಮೃತಪಟ್ಟಿದ್ದರು. ಇವರಿಬ್ಬರು ತಮ್ಮ ಮದುವೆ ವಾರ್ಷಿಕೋತ್ಸವ ಅಂಗವಾಗಿ ಜೂನ್ 3ರ ಮಧ್ಯಾಹ್ನ ಬೈಕ್ ನಲ್ಲಿ ಕೆರೆಗೋಡು ಗ್ರಾಮದ ಪಂಚಲಿಂಗೇಶ್ವರ ದೇವಾಲಯಕ್ಕೆ ತೆರಳುತ್ತಿದ್ದಾಗ ಮರಿಲಿಂಗನದೊಡ್ಡಿ ಗ್ರಾಮದ ಬಳಿ ಹಿಂದಿನಿಂದ ಬಂದ ಕಾರ್ ಡಿಕ್ಕಿ ಹೊಡೆದು ಸುನೀಲಾ ಸ್ಥಳದಲ್ಲೇ ಮೃತಪಟ್ಟಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಮಂಜುನಾಥ್ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅವರ ಅಂಗಾಂಗಗಳನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಈ ಮೂಲಕ ದಂಪತಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular