ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ದ್ಸಂಬ್ಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ತಲೆದಂಡವಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೋರ್ವ ಸಚಿವರ ಹೆಸರು ಕೇಳಿ ಬರುತ್ತಿದೆ.
ನಿಗಮದಲ್ಲಿನ ಅಕ್ರಮಗಳ ಸಾಕ್ಷ್ಯ ನಾಶಕ್ಕೆ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಕಚೇರಿಯಲ್ಲಿಯೇ ಸಂಚು ರೂಪಿಸಲಾಗಿತ್ತು ಎಂಬ ಅಂಶವನ್ನು ಪ್ರಕರಣದ 8ನೇ ಆರೋಪಿ ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರಿನ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ 8ನೇ ಆರೋಪಿ ಪರ ವಕೀಲರು ಈ ಅಫಿಡವಿಟ್ ಸಲ್ಲಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರ ಕಚೇರಿಯಲ್ಲಿ ಮೇ 24ರಂದು ಸಭೆ ನಡೆದು, ಅಕ್ರಮದ ಸಾಕ್ಷ್ಯ ನಾಶ ಕುರಿತು ಚರ್ಚೆಯಾಗಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗಿನ ಕಚೇರಿಯ ಸಿಸಿಟಿವಿ ಪುಟೇಜ್ ಗಳನ್ನು ವಶಕ್ಕೆ ಪಡೆದು ಸಂರಕ್ಷಿಸಲು ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರ್ಟ್ ನಲ್ಲಿ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ್ ವಿರುದ್ಧವೂ ಗಂಭೀರ ಆರೋಪ ಕೇಳಿಬಂದಿದೆ.