HomeKarnatakaSHOCKING : ಮಗಳ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ; ಮರ್ಯಾದೆಗೆ ಅಂಜಿ ವಿಷ...

SHOCKING : ಮಗಳ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಇಡೀ ಕುಟುಂಬ..!

ಚಾಮರಾಜನಗರ : ಪಾಪಿಯೋರ್ವ ಯುವತಿಯ ಖಾಸಗಿ ಫೋಟೋ, ವಿಡಿಯೋ  ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದು, ಮರ್ಯಾದೆಗೆ ಅಂಜಿ ಇಡೀ ಕುಟುಂಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.

ಚಂದಗಾಲು ಗ್ರಾಮದ ಮಹದೇವನಾಯಕ ಎಂಬುವವರ ಪುತ್ರಿ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ ಈಕೆ ಬರು ಬರುತ್ತಾ ಆತನಿಂದ ದೂರ ಹೋದಾಗ ಆತ ರಿಷಿಕಾ ಜೊತೆಯಿದ್ದ ನಗ್ನ ಫೋಟೋ ಹಾಗೂ ವಿಡಿಯೋ ಇಟ್ಟುಕೊಂಡು ಬೆದರಿಕೆ ಹಾಕಿದ್ದನು ಎನ್ನಲಾಗಿದೆ.

ಈ ವಿಚಾರ ತಿಳಿದ ಕುಟುಂಬ ಹೊರಗಡೆ ಈ ವಿಷಯ ತಿಳಿದರೆ ನಮ್ಮ ಮರ್ಯಾದೆ ಹೋಗುತ್ತದೆ ಎಂದು ಬೇಸತ್ತ ಕುಟುಂಬ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ರಿಷಿಕಾ ತಂದೆ ಮಹದೇವನಾಯಕ ಮೃತಪಟ್ಟಿದ್ರೆ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ. ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮಹದೇಶ್ವರರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular