alex Certify ಜೂ.16 ರೊಳಗೆ BBMP ಶಾಲೆ, ಕಾಲೇಜುಗಳಿಗೆ ಉಪನ್ಯಾಸಕರನ್ನು ನಿಯೋಜಿಸಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂ.16 ರೊಳಗೆ BBMP ಶಾಲೆ, ಕಾಲೇಜುಗಳಿಗೆ ಉಪನ್ಯಾಸಕರನ್ನು ನಿಯೋಜಿಸಲು ಸೂಚನೆ

ಬೆಂಗಳೂರು : ಜೂ.16 ರೊಳಗೆ ಬಿಬಿಎಂಪಿ ಶಾಲೆ, ಕಾಲೇಜುಗಳಿಗೆ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ನಿಯೋಜಿಸಲು ಬಿಬಿಎಂಪಿ ಸೂಚನೆ ನೀಡಿದೆ.

ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಿಗೆ ಎಸ್ಡಿಎಂಸಿ ಮತ್ತು ಸಿಡಿಸಿ ಮೂಲಕ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಜೂನ್ 16ರೊಳಗೆ ನಿಯೋಜಿಸಿಕೊಳ್ಳಲು ಸೂಚಿಸಲಾಗಿದೆ.

ಶಿಕ್ಷಣ ಇಲಾಖೆಯಿಂದ ಬೋಧಕ ಹುದ್ದೆಗಳಿಗೆ ಖಾಯಂ ಶಿಕ್ಷಕ, ಉಪನ್ಯಾಸಕರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ನೇಮಕವಾಗುವವರೆಗೆ ಅಥವಾ 2024-25ನೇ ಶೈಕ್ಷಣಿಕ ಸಾಲಿಗೆ ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಲ್ಲಿರುವ ಎಸ್ಡಿಎಂಸಿ ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿಯಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರನ್ನು ನಿಯೋಜಿಸಿಕೊಳ್ಳಬೇಕು ಎಂದು ಬಿಬಿಎಂಪಿ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...