HomeIndiaBREAKING NEWS: ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಖರ್ಗೆ, ಸೋನಿಯಾ ಗಾಂಧಿ ಸೇರಿ 'ಇಂಡಿಯಾ' ನಾಯಕರು...

BREAKING NEWS: ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಖರ್ಗೆ, ಸೋನಿಯಾ ಗಾಂಧಿ ಸೇರಿ ‘ಇಂಡಿಯಾ’ ನಾಯಕರು ಭಾಗಿ

ನವದೆಹಲಿ: ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ‘ಇಂಡಿಯಾ’ ಮೈತ್ರಿಕೂಟದ ಹಲವು ಪ್ರಮುಖರು ಭಾಗವಹಿಸಲಿದ್ದಾರೆ.

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಪ್ರಮಾಣವಚನ ಸ್ವೀಕಾರ ಸಮಾರಂಭದಿಂದ ದೂರ ಉಳಿಯಲಿದ್ದಾರೆ. ಈ ಹಿಂದೆ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನವಿದ್ದರೂ, ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಅನೇಕ ನಾಯಕರು ದೂರ ಉಳಿದಿದ್ದರು. ಇದೀಗ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಾಜರಾಗುವುದನ್ನು ಖಚಿತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular