HomeIndiaಘಟಾನುಘಟಿಗಳ ನಡುವೆ ಸೋಮಣ್ಣಗೆ ಖುಲಾಯಿಸಿದ ಅದೃಷ್ಟ

ಘಟಾನುಘಟಿಗಳ ನಡುವೆ ಸೋಮಣ್ಣಗೆ ಖುಲಾಯಿಸಿದ ಅದೃಷ್ಟ

ನವದೆಹಲಿ: ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಐವರಿಗೆ ಮಂತ್ರಿ ಸ್ಥಾನದ ಅವಕಾಶ ಸಿಕ್ಕಿದೆ.

ತುಮಕೂರು ನೂತನ ಸಂಸದ ವಿ. ಸೋಮಣ್ಣ ಅವರ ಅದೃಷ್ಟ ಖುಲಾಯಿಸಿದೆ. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ನಾಲ್ಕೈದು ಬಾರಿ ಸಂಸದರಾಗಿರುವ ಗದ್ದಿಗೌಡರ್, ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರ ನಡುವೆ ಸೋಮಣ್ಣ ಅವರಿಗೆ ಮಂತ್ರಿ ಖಾತೆ ಒಲಿದು ಬಂದಿದೆ.

ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮೊದಲ ಬಾರಿಗೆ ಕೇಂದ್ರ ಸಚಿವ ಸ್ಥಾನ ಒಲಿದುಬಂದಿದೆ. ಈ ಹಿಂದೆ ಬಿಜೆಪಿಯ ಎಸ್. ಮಲ್ಲಿಕಾರ್ಜುನಯ್ಯ ಲೋಕಸಭೆ ಡೆಪ್ಯುಟಿ ಸ್ಪೀಕರ್ ಆಗಿದ್ದರು. ಈಗ ಮೊದಲ ಬಾರಿಗೆ ಸಂಸದರಾದ ಸೋಮಣ್ಣ ಅವರಿಗೆ ಕೇಂದ್ರ ಸಚಿವರಾಗುವ ಅವಕಾಶ ಸಿಕ್ಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸೋಮಣ್ಣ, ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಜವಾಬ್ದಾರಿ ಹಾಗೂ ಕರ್ತವ್ಯ ನಿರ್ವಹಿಸುವಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಎಲ್ಲರೂ ಹೇಗೆ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಎಲ್ಲಕ್ಕಿಂತ ದೇಶ ದೊಡ್ಡದು. ಚೆನ್ನಾಗಿ ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಪಕ್ಷ ಅವಕಾಶ ನೀಡಿದೆ. ಪಕ್ಷ ಹೇಳಿದಂತೆ ನಡೆದುಕೊಂಡಿದ್ದೇನೆ. ಪಕ್ಷದ ನಾಯಕರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಸೋಮಣ್ಣ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular