ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಉತ್ತರ ಪ್ರದೇಶದ ಲಖನೌ ಕ್ಷೇತ್ರದ ಸಂಸದರಾಗಿರುವ ರಾಜನಾಥ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಕೇಂದ್ರ ಸಚಿವರಾಗಿ ಅಮಿತ್ ಶಾ, ನಿತಿನ್ ಗಡ್ಕರಿ, ಜೆ.ಪಿ. ನಡ್ಡಾ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಅವರೊಂದಿಗೆ ಕ್ಯಾಬಿನೆಟ್ ಸಚಿವರಾಗಿ ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ್, ಮನೋಹರ್ ಲಾಲ್ ಖಟ್ಟರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
#WATCH | BJP leaders Amit Shah, Rajnath Singh, Nitin Gadkari, Sarbananda Sonowal, Rajiv Ranjan (Lalan) Singh, JP Nadda, Shivraj Singh Chouhan, Dharmendra Pradhan, Piyush Goyal, Jyotiraditya Scindia, Gajendra Singh Shekhawat & Mansukh Mandaviya present at the Forecourt of… pic.twitter.com/B4UKtoIkwG
— ANI (@ANI) June 9, 2024

