HomeKarnatakaಅಂತರ್ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿರುವ ಪೊಲೀಸರಿಗೆ ಮಹತ್ವದ ಮಾಹಿತಿ

ಅಂತರ್ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿರುವ ಪೊಲೀಸರಿಗೆ ಮಹತ್ವದ ಮಾಹಿತಿ

ಅಂತರ್ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿರುವ ಪೊಲೀಸರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲು ತೀರ್ಮಾನಿಸಲಾಗಿದೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಎರಡು ತಿಂಗಳುಗಳ ಕಾಲ ಯಾವುದೇ ಕೆಲಸ ಕಾರ್ಯಗಳನ್ನು ನಡೆಸಲು ಸಾಧ್ಯವಾಗಿರಲಿಲ್ಲ ಎಂದು ಹೇಳಿದರು.

ಇದೀಗ ನೀತಿ ಸಂಹಿತೆ ಮುಗಿದಿರುವ ಹಿನ್ನೆಲೆಯಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಶೀಘ್ರ ಚಾಲನೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಈ ಹಿಂದೆ ಅಂತರ್ ಜಿಲ್ಲಾ ವರ್ಗಾವಣೆ ಕೋರಿ ಹಲವು ಪೊಲೀಸ್ ಕಾನ್ಸ್ಟೇಬಲ್ ಗಳು ಅರ್ಜಿ ಸಲ್ಲಿಸಿದ್ದರೂ ಕೂಡ ವಿವಿಧ ಕಾರಣಗಳಿಗಾಗಿ ಒಂದೂವರೆ ವರ್ಷದಿಂದ ಇದು ಸಾಧ್ಯವಾಗಿರಲಿಲ್ಲ. ಇದೀಗ ಈ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುತ್ತದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular