ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೂನ್ 9ರಂದು ನಡೆದ ಪ್ರಮಾಣವಚನ ಕಾರ್ಯಕ್ರಮದ ಅದ್ದೂರಿ ಸಮಾರಂಭಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಅನಾರೋಗ್ಯ ಕಾರಣದಿಂದ ಗೈರಾಗಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗಿದ್ದರ ಬಗ್ಗೆ ವಿಚಾರಿಸಿದ್ದಾರೆ. ಇದೇ ವೇಳೆ ದೇವೇಗೌಡರ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದಿದ್ದಾರೆ.