alex Certify BIG BREAKING : ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅರೆಸ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING : ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅರೆಸ್ಟ್..!

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು  ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದ್ದು, ರೇಣುಕಾ ಸ್ವಾಮಿ ಪವಿತ್ರಗೌಡಗೆ ಕೆಟ್ಟದಾಗಿ ಮೆಸೇಜ್ ಹಾಕಿದ್ದರು. ಹಾಗೂ ಅಶ್ಲೀಲವಾಗಿ ಸಂದೇಶ, ಫೋಟೋ ಕಳುಹಿಸಿದ್ದರು ಎನ್ನಲಾಗಿದೆ.

ಆದ್ದರಿಂದ ನಟ ದರ್ಶನ್ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಲು ಸೂಚನೆ ನೀಡಿದ್ದರು ಎನ್ನಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾ ಸ್ವಾಮಿ ಅವರನ್ನು ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...