ಬೆಂಗಳೂರು : ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸುದ್ದಿ ಕೇಳಿ ಇಡೀ ಸ್ಯಾಂಡಲ್ ವುಡ್ ಬೆಚ್ಚಿ ಬಿದ್ದಿದೆ.
ರೇಣುಕಾ ಸ್ವಾಮಿ ಎಂಬುವವರ ಕೊಲೆ ಪ್ರಕರಣದಲ್ಲಿ ಮೈಸೂರಿನಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದ್ದು, ರೇಣುಕಾ ಸ್ವಾಮಿ ಪವಿತ್ರಗೌಡಗೆ ಕೆಟ್ಟದಾಗಿ ಮೆಸೇಜ್ ಹಾಕಿದ್ದರು. ಹಾಗೂ ಅಶ್ಲೀಲವಾಗಿ ಸಂದೇಶ, ಫೋಟೋ ಕಳುಹಿಸಿದ್ದರು ಎನ್ನಲಾಗಿದೆ. ಆದ್ದರಿಂದ ನಟ ದರ್ಶನ್ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಲು ಸೂಚನೆ ನೀಡಿದ್ದರು ಎನ್ನಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾ ಸ್ವಾಮಿ ಅವರನ್ನು ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.