ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ‘ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣದ ಆರೋಪಿಗಳನ್ನು ವಿಚಾರಣೆ ನಡೆಸಿದಾಗ ದರ್ಶನ್ ಹೆಸರು ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಯುತ್ತೆ, ಅಲ್ಲಿವರೆಗೂ ಏನೂ ಹೇಳುವುದಕ್ಕೆ ಆಗಲ್ಲ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಪ್ರಕರಣದಲ್ಲಿ ಅವರು ನೇರವಾಗಿ ಭಾಗಿ ಆಗಿದ್ರಾ..? ಎಂಬುದರ ಬಗ್ಗೆ ತನಿಖೆ ನಡೆಯಲಿದೆ. ಈಗಲೇ ಏನೂ ಹೇಳುವುದಕ್ಕೆ ಆಗಲ್ಲ ಎಂದರು.