ನವದೆಹಲಿ: ಪೆಟ್ರೋಲ್, ಡೀಸೆಲ್ ಮತ್ತು ನೈಸರ್ಗಿಕ ಅನಿಲಗಳನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರಲು ಪ್ರಯತ್ನಿಸುವುದಾಗಿ ಪೆಟ್ರೋಲಿಯಂ ಖಾತೆ ಸಚಿವ ಹರ್ ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಪೆಟ್ರೋಲಿಯಂ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಸಚಿವರು, ಪೆಟ್ರೋಲ್ ಮತ್ತು ಡೀಸೆಲ್ ಜಿ.ಎಸ್.ಟಿ. ವ್ಯಾಪ್ತಿಗೆ ತರಲು 2020ರಲ್ಲಿಯೇ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ ರಾಜ್ಯಗಳಿಗೆ ಪ್ರಮುಖವಾಗಿ ಆದಾಯ ಬರುವುದು ಪೆಟ್ರೋಲ್ ಮತ್ತು ಡೀಸೆಲ್ ಗಳ ಮೇಲೆ ಹೇರಲಾಗಿರುವ ತೆರಿಗೆಯಿಂದ. ಹೀಗಾಗಿ ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಪ್ರಸ್ತಾವ ನನೆಗುದಿಗೆ ಬಿದ್ದಿತ್ತು. ಈಗ ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತರಲು ಮತ್ತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಸಚಿವ ಹರ್ ದೀಪ್ ಸಿಂಗ್ ಅವರ ಈ ಹೇಳಿಕೆಯಿಂದ ಪೆಟ್ರೋಲಿಯಂ ಕಂಪನಿಗಳ ಷೇರುಗಳು ದಿಢೀರ್ ಕುಸಿತ ಕಂಡಿವೆ. ಜಿ.ಎಸ್.ಟಿ. ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ತಂದರೆ ದರ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.