alex Certify ‘ಪಂಡಿತ್ ರಾಜೀವ್ ತಾರಾನಾಥ್’ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪಂಡಿತ್ ರಾಜೀವ್ ತಾರಾನಾಥ್’ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ..!

ಬೆಂಗಳೂರು : ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಜಗತ್ಪ್ರಸಿದ್ದ ಸರೋದ್ ವಾದಕ, ಕರ್ನಾಟಕದ ಹೆಮ್ಮೆಯ ಸುಪುತ್ರ ಪಂಡಿತ ರಾಜೀವ್ ತಾರಾನಾಥ್ ಅವರ ನಿಧನದಿಂದ ದು:ಖಿತನಾಗಿದ್ದೇನೆ. ಕರ್ನಾಟಕದ ಕೀರ್ತಿ ಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ರಾಜೀವ್ ತಾರಾನಾಥರ ಅಗಲಿಕೆ ಕರ್ನಾಟಕಕ್ಕೆ ಮಾತ್ರವಲ್ಲ ಇಡೀ ಸಂಗೀತಲೋಕಕ್ಕೆ ತುಂಬಲಾರದ ನಷ್ಟ. ರಾಜೀವ್ ತಾರಾನಾಥ್ ಖ್ಯಾತ ಸಂಗೀತ ಕಲಾವಿದರು ಮಾತ್ರ ಆಗಿರಲಿಲ್ಲ, ಅದನ್ನು ಮೀರಿ ಶ್ರೇಷ್ಠ ಮಾನವತಾವಾದಿಯಾಗಿದ್ದರು. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...