ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಇದುವರೆಗೆ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಅಂದ್ರೆ ಆರೋಪಿಗಳ ಸಂಖ್ಯೆ 17 ಕ್ಕೇರಿಕೆಯಾಗಿದೆ.
ಹೌದು. ಈ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮತ್ತೆ ನಾಲ್ವರು ಭಾಗಿಯಾಗಿರುವುದು ಖಚಿತವಾಗಿದೆ. ಜಗ್ಗು ಅಲಿಯಾಸ್ ಜಗದೀಶ್, ಅನು, ರವಿ, ರಾಜು ಎಂಬ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಬಲೆ ಬೀಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಮತ್ತೋರ್ವ ಮಹಿಳೆ ಅನು ಯಾರು..? ಪ್ರಕರಣಕ್ಕೂ ಈಕೆಗೂ ಸಂಬಂಧವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಆರೋಪಿಗಳ ಸಂಖ್ಯೆ 17 ಕ್ಕೇರಿಕೆಯಾಗಿದ್ದು, ಉಳಿದ ನಾಲ್ವರಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪವಿತ್ರಾ ಗೌಡ ಎ 1 ಆರೋಪಿ, ದರ್ಶನ್ ಎ 2 ಆರೋಪಿ ಯಾಗಿದ್ದಾರೆ. ಸದ್ಯ ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.