HomeKarnatakaBIG NEWS : ನಟ ದರ್ಶನ್'ಗೆ ಮತ್ತೊಂದು ಸಂಕಷ್ಟ ; 'ವನ್ಯಜೀವಿ ಸಂರಕ್ಷಣಾ ಕಾಯ್ದೆ'ಯಡಿ ಪ್ರಕರಣ...

BIG NEWS : ನಟ ದರ್ಶನ್’ಗೆ ಮತ್ತೊಂದು ಸಂಕಷ್ಟ ; ‘ವನ್ಯಜೀವಿ ಸಂರಕ್ಷಣಾ ಕಾಯ್ದೆ’ಯಡಿ ಪ್ರಕರಣ ದಾಖಲು..!

ಬೆಂಗಳೂರು : ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್’ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಈಗಾಗಲೇ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ 4 ವಿಶಿಷ್ಟ ಪ್ರಬೇದದ ಬಾತುಕೋಳಿ ಸಾಕಿದ ಹಿನ್ನೆಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅಲ್ಲದೇ ಚಿಕ್ಕಮಗಳೂರಿನ ಮುತ್ತೋಡಿ ವನ್ಯಜೀವಿ ಧಾಮದಲ್ಲಿ ಖಾಸಗಿ ವಾಹನ ಬಳಕೆ ಮಾಡಿ ಬಾಡೂಟ, ಎಣ್ಣೆ ಪಾರ್ಟಿ ಕೂಡ ನಡೆಸುವ ಮೂಲಕ ಅರಣ್ಯ ಮತ್ತು ವನ್ಯಜೀವಿ ಕಾಯಿದೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುತ್ತೋಡಿ ಭದ್ರ ವನ್ಯಜೀವಿ ತಾಣದಲ್ಲಿ ಖಾಸಗಿ ವಾಹನ ಬಳಕೆ ಮಾಡಿದ್ದಾರೆ. ಸೂಕ್ಷ್ಮ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಜೊತೆ ಬಾಡೂಟ, ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ವನ್ಯಜೀವಿ ಧಾಮಗಳಿಗೆ ದರ್ಶನ್ ಭೇಟಿ ನೀಡಿದ ಫೋಟೋ ಕೂಡ ವೈರಲ್ ಆಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular