ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೂ.18 ರವರೆಗೆ ಪ್ರಜ್ವಲ್ ರೇವಣ್ಣನನ್ನು ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಮತ್ತೆ ಎಸ್ ಐ ಟಿ ವಶಕ್ಕೆ ನೀಡುವಂತೆ ಎಸ್ ಐ ಟಿ ಅಧಿಕಾರಿಗಳು ಮನವಿ ಮಾಡಿದ ಹಿನ್ನೆಲೆ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಜೂ.18 ರವರೆಗೆ ಪ್ರಜ್ವಲ್ ರೇವಣ್ಣನನ್ನು ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆ ಕಳೆದ ವಾರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪ್ರಜ್ವಲ್ ಅವರಿಗೆ ಕಾರಾಗೃಹದ ಅಧಿಕಾರಿಗಳು ವಿಶೇಷ ಭದ್ರತಾ ವಿಭಾಗದ ಸೆಲ್ ನಲ್ಲಿ ಇರಿಸಿ ಅವರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 5664 ನೀಡಿದ್ದರು. .