HomeKarnatakaBIG NEWS: ಮಾಜಿ ಶಾಸಕ ರಘುಪತಿ ಭಟ್ ಪತ್ನಿ ನಾಪತ್ತೆ, ಆತ್ಮಹತ್ಯೆ ಕೇಸ್; ಆರೋಪಿ ಅತುಲ್...

BIG NEWS: ಮಾಜಿ ಶಾಸಕ ರಘುಪತಿ ಭಟ್ ಪತ್ನಿ ನಾಪತ್ತೆ, ಆತ್ಮಹತ್ಯೆ ಕೇಸ್; ಆರೋಪಿ ಅತುಲ್ ರಾವ್ ಖುಲಾಸೆ

ಉಡುಪಿ: ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅತುಲ್ ರಾವ್ ನನ್ನು ದೋಷಮುಕ್ತಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.

15 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಖುಲಾಸೆಗೊಂಡಿದ್ದಾನೆ. 2008ರ ಜೂನ್ 10ರಂದು ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಕರಂಬಳ್ಳಿಯ ತಮ್ಮ ನಿವಾಸದಿಂದ ಹೊರ ಹೋದವರು ನಾಪತ್ತೆಯಾಗಿದ್ದರು. ಪ್ರಕರಣ ಸಂಬಂಧ ರಘುಪತಿ ಭಟ್ ಬಾಲ್ಯ ಸ್ನೇಹಿತ ಅತುಲ್ ರಾವ್ ನಕಲಿ ದಾಖಲೆ ಸೃಷ್ಟಿಸಿ ಮೋಸ ಮಡಿದ್ದಾನೆ ಎಂದು ಮಣಿಪಾಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಸಿಓಡಿ ಪೊಲೀಸರು ಕೋರ್ಟ್ ಗೆ ಆರೋಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯ 2023ರ ನ.10ರಂದು ಆರೋಪಿ ಅತುಲ್ ಗೆ ಒಂದು ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿ ಜಿಲ್ಲಾ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದ. ಇದೀಗ ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಯಾಧೀಶ ದಿನೇಶ್ ಹೆಗ್ಡೆ, ಆರೋಪಿ ಅತುಲ್ ರಾವ್ ನನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular