ನವದೆಹಲಿ : ಅರುಣಾಚಲ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಪೆಮಾ ಖಂಡು ಅವರು ಸತತ ಮೂರನೇ ಬಾರಿಗೆ ಗುರುವಾರ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಟಾನಗರದ ದ.ಕ. ರಾಜ್ಯ ಸಮಾವೇಶ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ ಮತ್ತು ಕಿರಣ್ ರಿಜಿಜು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಇತರರು ಭಾಗವಹಿಸಿದ್ದು, ಕಾರ್ಯಕ್ರಮಕ್ಕೆ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ.
#WATCH | Pema Khandu takes oath as the Chief Minister of Arunachal Pradesh. pic.twitter.com/413tSLcgrY
— ANI (@ANI) June 13, 2024

