ಬೆಂಗಳೂರು : ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಸುತ್ತಾಮುತ್ತಾ ಶಾಮಿಯಾನ ಹಾಕಿಸಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು, ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ 5 ದಿನ 144 ಸೆಕ್ಷನ್ ಜಾರಿ ಮಾಡಲಾಗಿದೆ.
ನಗರದ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತಾಮುತ್ತಾ ದರ್ಶನ್ ಅಭಿಮಾನಿಗಳು ದೌಡಾಯಿಸುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
. ಠಾಣೆಯಲ್ಲಿ ನಡೆಯುವ ಯಾವುದೇ ಚಟುವಟಿಕೆಗಳು ಕಾಣದಂತೆ ಸುತ್ತಾಮುತ್ತಾ ಶಾಮಿಯಾನ ಹಾಕಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳು ಶಾಮಿಯಾನ ಹಾಕಿಸಿದ್ದಾರೆ. ಹೌದು. ಪೊಲೀಸ್ ಠಾಣೆಯಲ್ಲಿ ನಡೆಯುವ ಯಾವುದೇ ಚಟುವಟಿಕೆಗಳು ಹೊರಗಡೆ ಕಾಣಬಾರದು ಎಂದು ಪೊಲೀಸ್ ಠಾಣೆ ಸುತ್ತಾಮುತ್ತಾ ಶಾಮಿಯಾನ ಅಳವಡಿಸಿದ್ದಾರೆ.
ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಿನ್ನೆ ನಡೆದಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮತ್ತು ಸಹಚರರನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಕೊಲೆ ನಡೆದ ಸ್ಥಳ ಪಟ್ಟಣಗೆರೆ ಶೆಡ್ ಗೆ ಆರೋಪಿಗಳನ್ನು ಕರೆದೊಯ್ದು ಪೊಲೀಸರು ನಿನ್ನೆ ಸ್ಥಳ ಮಹಜರು ನಡೆಸಿದ್ದಾರೆ.