ಬೆಂಗಳೂರು : ತಯಾರಿಕೆಗೂ ಮುನ್ನವೇ ಪಿಒಪಿ ಗಣಪತಿ ಮೂರ್ತಿ ನಿಷೇಧ ಮಾಡಲು ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಆದೇಶ ನೀಡಿದೆ.
ಈ ಬಗ್ಗೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಮಾಹಿತಿ ನೀಡಿದ್ದು, ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಗಣಪತಿ ಮೂರ್ತಿಗಳ ವಿಸರ್ಜನೆಯಿಂದ ಜಲಮೂಲಗಳು ಕಲುಷಿತಗೊಳ್ಳುತ್ತಿವೆ. ಮೊದಲೇ ತಿಳಿಸಿದ್ದರೆ, ಪಿಒಪಿ ಗಣಪತಿ ಮೂರ್ತಿಗಳನ್ನು ತಯಾರಿಸುತ್ತಿರಲಿಲ್ಲ ಎಂದು ಈ ಮಾದರಿಯ ಗಣಪತಿ ತಯಾರಕರು ಪ್ರತಿ ವರ್ಷ ಹೇಳುತ್ತಾರೆ. ಹಾಗಾಗಿ ತಯಾರಿಕೆ ಆರಂಭಿಸುವ ಮೊದಲೇ ನೋಟಿಸ್ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.