ಬೆಂಗಳೂರು : ವಕೀಲರ ಮೇಲೆ ಹಲ್ಲೆ ನಡೆಸಿದ್ರೆ 3 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.
ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ – 2023 ಜಾರಿ ಮಾಡಲಾಗಿದೆ. ಅದರಂತೆ ಕರ್ತವ್ಯದ ವೇಳೆ ವೃತ್ತಿಪರ ವಕೀಲರ ಮೇಲೆ ಹಲ್ಲೆ ನಡೆಸುವುದು, ಅವರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಬೆದರಿಕೆ ಹಾಕುವುದು ಅಥವಾ ಕಿರುಕುಳ ನೀಡುವುದು ಶಿಕ್ಷಾರ್ಹ ಅಪರಾಧವಾಗಿದೆ. ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ 6 ತಿಂಗಳಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹1 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.