ಮಂಡ್ಯ : ಕಾವೇರಿ ನದಿಯಲ್ಲಿ ಈಜಲು ಹೋದ ಬಾಲಕರಿಬ್ಬರು ಮೃತಪಟ್ಟ ಘಟನೆ ಶ್ರೀರಂಗಪಟ್ಟಣದ ಗಂಜಾಮ್ ಸಮೀಪ ನಡೆದಿದೆ.
ಮೃತರನ್ನು ವಿಶಾಲ್ (19) ರೋಹಣ್ (17) ಎಂದು ಗುರುತಿಸಲಾಗಿದೆ. ಕಾವೇರಿ ನದಿಯಲ್ಲಿ ವಿಶಾಲ್ ಹಾಗೂ ರೋಹಣ್ ಈಜಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ತಮಿಳುನಾಡು ಮೂಲದ ಬಾಲಕರು ಅಜ್ಜಿ ಮನೆಗೆ ಬಂದಾಗ ಈಜಲು ಹೋಗಿದ್ದಾರೆ.
ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.