ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತಾಗಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳ ವಿಚಾರಣೆ ಮುಂದುವರೆದಿದೆ.
ಪೊಲೀಸ್ ಕಸ್ಟಡಿ ಅಂತ್ಯಗೊಳ್ಳಲು ಎರಡು ದಿನ ಮಾತ್ರ ಬಾಕಿ ಉಳಿದ ಹಿನ್ನೆಲೆಯಲ್ಲಿ ಇಂದಿನಿಂದ ಆರೋಪಿಗಳ ವಿಚಾರಣೆ ಮತ್ತಷ್ಟು ತೀವ್ರಗೊಳ್ಳಲಿದೆ. ಈಗಾಗಲೇ ತನಿಖಾಧಿಕಾರಿಗಳು ಆರೋಪಿಗಳನ್ನು ಪ್ರತ್ಯೇಕ ವಿಚಾರಣೆಗೆ ಒಳಪಡಿಸಿದ್ದಾರೆ.
ಅನೇಕ ಮಾಹಿತಿಗಳನ್ನು ಕಲೆ ಹಾಕಿದ್ದು, ಇಂದು ಆರೋಪಿಗಳ ಮುಖಾಮುಖಿ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಈ ಹಿಂದಿನ ಹೇಳಿಕೆ ಆಧರಿಸಿ ಇಂದು ಮತ್ತಷ್ಟು ವಿಚಾರಣೆ ನಡೆಸಲಾಗುವುದು. ಅನ್ನಪೂರ್ಣೇಶ್ವರಿ ಠಾಣೆ ಸುತ್ತಮುತ್ತ ಸೆಕ್ಷನ್ 144 ಜಾರಿ ಮಾಡಲಾಗಿದೆ.