HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ಜಿಲ್ಲಾ ಮಟ್ಟದಲ್ಲೇ ಸಮಸ್ಯೆಗಳ ಪರಿಹರಿಸಲು 'ಜನತಾದರ್ಶನ'ಕ್ಕೆ ಮರು ಚಾಲನೆ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಜಿಲ್ಲಾ ಮಟ್ಟದಲ್ಲೇ ಸಮಸ್ಯೆಗಳ ಪರಿಹರಿಸಲು ‘ಜನತಾದರ್ಶನ’ಕ್ಕೆ ಮರು ಚಾಲನೆ

ಬೆಂಗಳೂರು: ಸಾರ್ವಜನಿಕರ ಅಹವಾಲು, ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ಜನತಾ ದರ್ಶನಕ್ಕೆ ಮರು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ.

ಚುನಾವಣೆ ನೀತಿ ಸಂಹಿತೆ ತೆರವಾದ ಹಿನ್ನೆಲೆಯಲ್ಲಿ ಜನತಾ ದರ್ಶನ ಮರು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಜಿಲ್ಲಾಮಟ್ಟದಲ್ಲೇ ಜನರ ಅಹವಾಲು ಆಲಿಸಿ ಪರಿಹಾರ ಸೂಚಿಸಲು ಜನತಾದರ್ಶನಕ್ಕೆ ಮರು ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

ಜನತಾದರ್ಶನವನ್ನು ಮತ್ತೆ ಆರಂಭಿಸಬೇಕು. ಜನರ ಬೇಡಿಕೆಗಳು, ಅಹವಾಲುಗಳನ್ನು ಸ್ವೀಕರಿಸಿ ಗಂಭೀರವಾಗಿ ಪರಿಗಣಿಸಿ ಸ್ಪಂದಿಸಬೇಕು. ಆಡಳಿತವನ್ನು ಜನಪರವಾಗಿಸಲು ಏನೆಲ್ಲ ಮಾಡಬೇಕು ಎಂಬುದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಮುಖ್ಯಮಂತ್ರಿಗಳು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular