HomeEntertainmentಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರೀ ಲೀಲಾ

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರೀ ಲೀಲಾ

 

 

ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ಶ್ರೀ ಲೀಲಾ ಇಂದು 23ನೇ ವಸಂತಕ್ಕೆ ಕಾಲಿಟ್ಟಿದ್ದು ಅವರ ಅಭಿಮಾನಿಗಳಿಂದ ಮತ್ತು ಸಿನಿ ತಾರೆಯರಿಂದ ಶುಭಾಶಯಗಳು ಮಹಾಪೂರವೇ ಹರಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2017ರಲ್ಲಿ ತೆರೆ ಕಂಡ ತೆಲುಗಿನ ಚಿತ್ರಾಂಗದ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಇವರು 2019 ರಂದು ಕನ್ನಡದ ಕಿಸ್ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು.

2021 ರಂದು ತೆಲುಗಿನ ‘ಪೆಳ್ಳಿ ಸಂದಡಿ’ ಯಲ್ಲಿ ಅಭಿನಯಿಸಿದ ಇವರಿಗೆ ಬಳಿಕ ಸಾಲು ಸಾಲು ಸಾಲು ಆಫರ್ ಗಳು ಬಂದವು. ರವಿ ತೇಜ ನಟನೆಯ ‘ಧಮಾಕ’ ಸಿನಿಮಾದಲ್ಲಿ ಕಾಣಿಸಿಕೊಂಡ ನಂತರ ಶ್ರೀ ಲೀಲಾ ಟಾಲಿವುಡ್ ನ ಬೇಡಿಕೆಯ ನಟಿಯಾದರು. ಕಳೆದ ವರ್ಷ ‘ಗುಂಟೂರು ಕಾರಮ್’ ನಲ್ಲಿ ತೆರೆ ಹಂಚಿಕೊಂಡಿದ್ದ ಇವರು ಇತ್ತೀಚಿಗೆ ‘ಉಸ್ತಾದ್ ಭಗತ್ ಸಿಂಗ್’ ಸೇರಿದಂತೆ ರವಿತೇಜಾರವರ 75ನೇ ಚಿತ್ರದ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular