ಬೆಂಗಳೂರು : ಬೆಂಗಳೂರು ವಿಮಾನ ನಿಲ್ದಾಣದ ಇಂದಿರಾ ಕ್ಯಾಂಟೀನ್ ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟ್ಯಾಕ್ಸಿ ವಾಹನ ನಿಲುಗಡೆ ಸ್ಥಳದಲ್ಲಿ ಸರ್ಕಾರ ಆರಂಭಿಸಿರುವ ಇಂದಿರಾ ಕ್ಯಾಂಟೀನ್ ಶ್ರಮಿಕರ ಮನಗೆದ್ದಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ದಿನನಿತ್ಯ 3 ಸಾವಿರಕ್ಕೂ ಹೆಚ್ಚು ಮಂದಿ ಆಹಾರ ಸೇವಿಸುತ್ತಿದ್ದು, ಸೇವೆ ಆರಂಭವಾದ ಮೂರೇ ತಿಂಗಳಲ್ಲಿ ಜನಮೆಚ್ಚುಗೆ ಗಳಿಸಿದೆ.100 ದಿನ ತುಂಬುವ ಮುನ್ನವೇ ಬಹಳಷ್ಟು ಜನರ ಹಸಿವು ನೀಗಿಸುವ ಭೋಜನಾಲಯವಾಗಿ ಪರಿವರ್ತಿತವಾಗಿದೆ. ಮೂರು ಹೊತ್ತು ಹೆಚ್ಚಿನ ಮಂದಿ ಆಹಾರ ಸೇವನೆಗೆ ಇಲ್ಲಿಗೆ ಆಗಮಿಸುತ್ತಾರೆ. ವಾರಾಂತ್ಯದಲ್ಲಿ ಕೆಲವೊಮ್ಮೆ 4 ಸಾವಿರಕ್ಕೂ ಹೆಚ್ಚು ಮಂದಿ ಇಂದಿರಾ ಕ್ಯಾಂಟೀನ್ನಲ್ಲಿ ಊಟ, ತಿಂಡಿ ಸೇವಿಸುತ್ತಾರೆ ಎಂದು ಸರ್ಕಾರ ತಿಳಿಸಿದೆ.