ಬೆಂಗಳೂರು : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಇಂದು ವಿಚಾರಣೆ ನಡೆಯಲಿದೆ.
ಒಂದು ವೇಳೆ ಹೈಕೋರ್ಟ್ ಅವರ ಅರ್ಜಿ ತಿರಸ್ಕರಿಸಿದ್ರೆ ಯಡಿಯೂರಪ್ಪ ಬಂಧನ ಫಿಕ್ಸ್ ಆಗಲಿದೆ. ಹೌದು, ಕೋರ್ಟ್ ಬಿ.ಎಸ್ ಯಡಿಯೂರಪ್ಪಗೆ ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದು, ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ.
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇರೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು, ನಂತರ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದರು. ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ತನ್ನ 17 ವರ್ಷದ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು.