ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನ ಜನರನ್ನು ಬೆಚ್ಚಿ ಬೀಳಿಸಿದೆ. ದರ್ಶನ್ ನನ್ನು ಡಿ ಬಾಸ್ ಎಂದು ಕರೆಯುತ್ತಿದ್ದ ಜನ ಇಂದು ಛೀಮಾರಿ ಹಾಕುತ್ತಿದ್ದಾರೆ.
ಇದೀಗ ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಕೊಲೆ ಪ್ರಕರಣ ಟ್ರೋಲ್ ಗೆ ಕಾರಣವಾಗಿದೆ. ‘ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾಗೌಡ ತಂಟೆಗೆ ಹೋದ್ರೆ ಕೊಲೆ’ ಎಂಬ ಪೋಸ್ಟ್ ಗಳನ್ನು ಹಾಕುತ್ತಾ ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.
ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ ಲಕ್ಷ್ಮೀ ನಿವಾಸ ಧಾರಾವಾಹಿ ಕಿರುತೆರೆ ಪ್ರೇಕ್ಷಕರ ಗಮನ ಸೆಳೆದಿದೆ. ಉತ್ತಮ ಟಿ ಆರ್ ಪಿ ಗಿಟ್ಟಿಸಿಕೊಂಡಿರುವ ಲಕ್ಷ್ಮೀ ನಿವಾಸ ಧಾರಾವಾಹಿ ಪಾತ್ರಗಳು ಬಹಳ ಚೆನ್ನಾಗಿ ಮೂಡಿ ಬರುತ್ತಿದೆ. ಈ ಧಾರಾವಾಹಿಯ ನಾಯಕ ಜಯಂತ್ ಪಾತ್ರ ಎಲ್ಲರ ಗಮನ ಸೆಳೆದಿದೆ. ತನ್ನ ಹೆಂಡತಿಯನ್ನು ಹುಚ್ಚನಂತೆ ಪ್ರೀತಿಸುವ ಜಯಂತ್ ಹೆಂಡತಿ ಮೇಲೆ ಅನುಮಾನ ಕೂಡ ಪಡುತ್ತಾನೆ. ಹಾಗಾಗಿ ಮನೆಯ ಕೇಬಲ್, ಲ್ಯಾಂಡ್ ಲೈನ್ ಫೋನ್ ಕೂಡ ಕಟ್ ಮಾಡುತ್ತಾನೆ. ಹೆಂಡತಿಯನ್ನು ಚಿನ್ನುಮರಿ ಎಂದು ಕರೆಯುವ ಜಯಂತ್ ಒಮ್ಮೊಮ್ಮೆ ಸೈಕೋ ರೀತಿಯಲ್ಲಿ ವರ್ತಿಸುತ್ತಾನೆ. ಈ ಧಾರಾವಾಹಿ ಬಗ್ಗೆ ಹಾಗೂ ನಟ ದರ್ಶನ್ ಕೊಲೆ ಪ್ರಕರಣದ ಬಗ್ಗೆ ನೆಟ್ಟಿಗರು ಪೋಸ್ಟ್ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ.
‘ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾಗೌಡ ತಂಟೆಗೆ ಹೋದ್ರೆ ಕೊಲೆ’ ಎಂಬ ಪೋಸ್ಟ್ ಗಳನ್ನು ಹಾಕುತ್ತಾ ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.
ದರ್ಶನ್ ಪ್ರಕರಣದ ಹಿನ್ನೆಲೆ
ಚಿತ್ರದುರ್ಗದ ರೇಣುಕಾ ಸ್ವಾಮಿ ( ಕೊಲೆಯಾದ ವ್ಯಕ್ತಿ), ಈ ರೇಣುಕಾ ಸ್ವಾಮಿ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ, ಫೋಟೋ ಕಳುಹಿಸಿದ್ದನು ಎನ್ನಲಾಗಿದೆ. ಪವಿತ್ರ ಗೌಡ ಕೂಡ ಈ ವಿಚಾರವನ್ನು ದರ್ಶನ್ ಗಮನಕ್ಕೆ ತಂದಿದ್ದರು . ನಂತರ ಯಾರೋ ಒಬ್ಬರು ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ರಾಘವೇಂದ್ರ ಎಂಬುವವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ನಂತರ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಕಾರ್ ಶೆಡ್ ಒಂದರಲ್ಲಿ ಹಲ್ಲೆ ನಡೆಸಲಾಗಿದೆ. ವೇಳೆ ನಟ ದರ್ಶನ್ ಕೂಡ ಸ್ಥಳದಲ್ಲಿದ್ದರು . ಅವರ ಸೂಚನೆ ಮೇರೆಗೆ ರೇಣುಕಾ ಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.