alex Certify BREAKING : ವಂಚನೆ, ಬೆದರಿಕೆ ಆರೋಪ : ಕೇಂದ್ರ ಸಚಿವ V.ಸೋಮಣ್ಣ ಪುತ್ರನ ವಿರುದ್ಧ ‘FIR’ ದಾಖಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಂಚನೆ, ಬೆದರಿಕೆ ಆರೋಪ : ಕೇಂದ್ರ ಸಚಿವ V.ಸೋಮಣ್ಣ ಪುತ್ರನ ವಿರುದ್ಧ ‘FIR’ ದಾಖಲು..!

ಬೆಂಗಳೂರು : ವಂಚನೆ, ಬೆದರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ವಂಚನೆ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ತೃಪ್ತಿ ಹೆಗಡೆ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ಅರ್ಜಿಯ ವಿಚಾರಣೆ ನಡೆಸಿದ ನಗರದ 37 ನೇ ಎಸಿಎಂಎಂ ಕೋರ್ಟ್ ತನಿಖೆ ನಡೆಸುವಂತೆ ಆದೇಶಿಸಿತ್ತು. ಜೀವನ್ ಕುಮಾರ್ ಮತ್ತು ಪ್ರಮೋದ್ ರಾವ್ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.

ಅರುಣ್ ಮತ್ತು ಮಧ್ವರಾಜ್ ಜಂಟಿಯಾಗಿ ನೈಬರ್ ಹುಡ್ ಎಂಬ ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯನ್ನು ಆರಂಭಿಸಿದ್ದರು. ಕಂಪನಿಯ ಹೂಡಿಕೆ, ಪಾವತಿ ಹಾಗೂ ಸಂಗ್ರಹಣೆಯ ಸಂಪೂರ್ಣ ಜವಾಬ್ದಾರಿ ಅರುಣ್ ಸೋಮಣ್ಣ ವಹಿಸಿಕೊಂಡಿದ್ದರು. ನಂತರ ವ್ಯವಹಾರದಲ್ಲಿ ನಷ್ಟವಾದಾಗ ಮಧ್ವರಾಜ್ ಅವರು ಅರುಣ್ ಬಳಿ ವಿಚಾರಿಸಿದ್ದಾರೆ, ಆದರೆ ಅವರು ಯಾವುದೇ ಮಾಹಿತಿ ನೀಡಲಿಲ್ಲ. ನಂತರ ಅರುಣ್ ಅವರು ಮಧ್ವರಾಜ್ ಅವರನ್ನು ಕಂಪನಿಯ ಪಾಲುದಾರಿಕೆಗೆ ರಾಜೀನಾಮೆ ಕೊಡುವಂತೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹಾಗೂ ಲಾಸ್ ಆಗಿದ್ದ ಹಣವನ್ನು ನೀಡುವಂತೆ ಬೆದರಿಸಿ, ಹಲ್ಲೆ ಮಾಡಿಸಿ ಮಧ್ವರಾಜ್ ದಂಪತಿಯಿಂದ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ದಾಖಲಿಸಿಕೊಂಡು ಸಂಜಯ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...