ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ (ಜೂನ್ 14) ಹೊಸ ಸಚಿವರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
ಆಂಧ್ರಪ್ರದೇಶದ ಸಚಿವರ ಖಾತೆಗಳ ಪಟ್ಟಿಯ ಪ್ರಕಾರ, ನಾಯ್ಡು ಅವರಿಗೆ ಕಾನೂನು ಮತ್ತು ಸುವ್ಯವಸ್ಥೆ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಪಂಚಾಯತ್ ರಾಜ್, ಪರಿಸರ, ಅರಣ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವನ್ನು ಹಂಚಿಕೆ ಮಾಡಲಾಗಿದೆ, ಸಿಎಂ ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಅವರಿಗೆ ಮಾನವ ಸಂಪನ್ಮೂಲ, ಐಟಿ, ಎಲೆಕ್ಟ್ರಾನಿಕ್ಸ್ ಮತ್ತು ಸಂವಹನದ ಜವಾಬ್ದಾರಿಯನ್ನು ನೀಡಲಾಗಿದೆ.
ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಬುಧವಾರ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ನಿತಿನ್ ಗಡ್ಕರಿ, ಚಿರಾಗ್ ಪಾಸ್ವಾನ್, ರಾಮದಾಸ್ ಅಠಾವಳೆ, ಅನುಪ್ರಿಯಾ ಪಟೇಲ್, ಬಂಡಿ ಸಂಜಯ್ ಕುಮಾರ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎನ್ಸಿಪಿ ನಾಯಕ ಪ್ರಫುಲ್ ಪಟೇಲ್, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಹಲವಾರು ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.